37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮನವಿ ನೀಡಿದರು.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹಲವಾರು ನ್ಯೂನತೆಗಳಿದ್ದು ನ್ಯೂನತೆಗಳ ಬಗ್ಗೆ ಡಯಾಲಿಸಿಸ್ ರೋಗಿಗಳು ನನಗೆ ಪದೇ ಪದೇ ದೂರು ನೀಡುತ್ತಿದ್ದಾರೆ. ತಾವು ಇತ್ತೀಚೆಗೆ ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂದು ಕೊರತೆಗಳ ಬಗ್ಗೆ ಅರಿತಿರುವಿರಿ. ಆದರೆ ಕೆಲವೊಂದು ಮುಖ್ಯವಾದ ಸಮಸ್ಯೆಗಳು ಇನ್ನೂ ಕೂಡ ಬಗೆಹರಿದಿಲ್ಲ ಎಂದು ರೋಗಿಗಳು ದೂರು ನೀಡಿರುತ್ತಾರೆ ಎಂದು ಬಂಗೇರರು ತಿಳಿಸಿದರು.

ಆದುದರಿಂದ ನ್ಯೂನತೆಗಳನ್ನು ಸರಿಪಡಿಸಿ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಅವರು ಸಚಿವರಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ, ರಾಜ್ಯ ಅಲ್ಪ ಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅಶ್ವಿತ್ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!