27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಶ್ರೀ ಧರ್ಮಸ್ಥಳ ಶಾಲೆಗಳ ಸಹಯೋಗದೊಂದಿಗೆ ಧರ್ಮಸ್ಥಳ ಹಾಗೂ ಪುದುವೆಟ್ಟು ಗ್ರಾಮದ ಕೃಷಿಕ ರೈತ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಟಲ್ ಜೀ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ ವಹಿಸಿದ್ದರು. ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ.ಉದ್ಘಾಟಿಸಿದರು.


ಸ್ಪರ್ಧಾತ್ಮಕ ಪರೀಕ್ಷೆಗಳ ಜಿಲ್ಲಾ ಮುಖ್ಯ ಸಂಯೋಜಕ ಎಲ್.ಎನ್.ಸುರೇಶ ಎಂ.ಎಸ್ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅಭಿವೃದ್ಧಿ ಅಧಿಕಾರಿ ಉಮೇಶ ಕೆ., ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್, ನಿರ್ದೇಶಕಿ ಧನಲಕ್ಷ್ಮೀ ಜನಾರ್ಧನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ, ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಪದ್ಮಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರಿಮಳ, ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯ 153 ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya
error: Content is protected !!