32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಏಳು ದಿನಗಳ ವಿಶೇಷ ಶಿಬಿರದ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಅನಂತೋಡಿ ಶ್ರಿ ಅನಂತಪದ್ಮನಾಭ ದೇವಸ್ಥಾನದ ಅಧ್ಯಕ್ಷರು, ನೋಟರಿ, ನ್ಯಾಯವಾದಿಗಳೂ ಆಗಿರುವ ಶ್ರೀನಿವಾಸ ಗೌಡರವರು ಶ್ರಮದಾನ ಕಾರ್ಯಕ್ರಮವನ್ನು ಗುದ್ದಲಿ ಪೂಜೆಯೊಂದಿಗೆ ಚಾಲನೆ ನೀಡಿದರು. ಅವರು ಮಾತನಾಡುತ್ತಾ ಶಿಬಿರದ ಮೂಲಕ ಜೀವನ ಕೌಶಲ ಮತ್ತು ಮೌಲ್ಯಗಳನ್ನು ಅರಿತುಕೊಂಡು ಬದುಕಿನ ಅನುಭವಗಳನ್ನು ಪಡಕೂಳ್ಳಬೇಕು. ಪರಸ್ಪರ ಸಹಕಾರ ಹೊದಾಣಿಕೆಯೊಂದಿಗೆ ಶಿಸ್ತುಬದ್ಧ ಜೀವನ ಕ್ರಮದ ಕಲಿಕೆ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಮೂಲಕ ಸಾನ್ಯವಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಅತಿಥಿಗಳಾದ ಬೆಳಾಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಸಂಜೀವ ಗೌಡ ಮಂಡಾಲು, ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಶುಭಹಾರೈಸಿದರು. ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪಯೋಜನಾಧಿಕಾರಿಗಳಾದ ಲೋಹಿತ್ ಎಸ್ ರವರು ಅತಿಥಿಗಳನ್ನು ಗೌರವಿಸಿದರು.

ಶಿಬಿರಾರ್ಥಿಗಳಾದ ಶ್ರೀಲತಾ ಸ್ವಾಗತಿಸಿ, ಪ್ರಕ್ಷಿತ್ ವಂದಿಸಿದರು, ದೀಪಿಕಾ ಕಾರ್ಯಕ್ರಮ ನಿರೂಪಿಸಿದರು. ಏಳು ದಿನಗಳಲ್ಲಿ ಸ್ವಚ್ಚತಾ ಆಂದೋಲನ, ಬೃಹತ್ ಉಚಿತ ವೈದ್ಯಕೀಯ ಶಿಬಿರ, ಶಾಲಾವರಣ ಶುಚಿತ್ವ, ಶಾಲಾ ಮಕ್ಕಳಿಗೆ ಶೈಕ್ಷಣಿಕ ಔದ್ಯೋಗಿಕ ಮಾಹಿತಿ, ಸಾಂಸ್ಕೃತಿಕ ಕಾರ್ಯಕ್ರಮ ಮುಂತಾದ ವೈವಿಧ್ಯಮಯ ಚಟುವಟಿಕೆಗಳು ಆಯೋಜನೆಗೊಂಡಿವೆ.

Related posts

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya
error: Content is protected !!