April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

ವೇಣೂರು: ಫೆಬ್ರವರಿ 2024ರಲ್ಲಿ ಜರುಗಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಸಭಾ ಕಾರ್ಯಕ್ರಮವು ಅ.16 ರಂದು ಶ್ರೀ ಬಾಹುಬಲಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಜೈನ ಮಠದ ಪರಮಪೂಜ್ಯ ಡಾ| ಚಾರುಕೀರ್ತಿ ಸ್ವಾಮೀಜಿ ಹಾಗೂ ಶ್ರೀ ಕನಕಗಿರಿ ಪರಮಪೂಜ್ಯ ಶ್ರೀ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನ ನೆರವೇರಿಸಿದರು.
ಮಂಗಳೂರು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಿದರು.

ಅಧ್ಯಕ್ಷತೆಯನ್ನು ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ ಸುಧಾಕರ್ ವಹಿಸಿದರು.
ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿದ್ದರು.


ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಕೋಲಾರ ಸಂಸದ ಮುನಿಯಪ್ಪ ಸ್ವಾಮಿ, ವಿಧಾನಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಎಸ್.ಎಲ್ ಭೋಜೆ ಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಹಾಗೂ ದಾನಿಗಳಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.

ಕು| ಸ್ತುತಿ ಎಸ್ ಕೊಂಬ ಪ್ರಾರ್ಥಿಸಿ, ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾಮಸ್ತಕಾಭಿಷೇಕ ಮಹೋತ್ಸವ ಸಮಿತಿ ಉಪಾಧ್ಯಕ್ಷ ನವೀನ್ ಚಂದ್ ಬಲ್ಲಾಳ್ ವಂದಿಸಿದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ : ಅಲ್-ಅಮೀನ್ ಯಂಗ್-ಮೆನ್ಸ್ ವತಿಯಿಂದ ಮಕ್ಕಳ ಸುನ್ನತ್ ಕಾರ್ಯಕ್ರಮ

Suddi Udaya
error: Content is protected !!