April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

ಬೆಳ್ತಂಗಡಿ; ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಮುಖ್ಯ ಅಧ್ಯಾಪಕರಾಗಿದ್ದ ಕಾರ್ಕಳ ಹೊಸ್ಮಾರು ನಿವಾಸಿ ಧರ್ಮಗುರು ಅಬ್ದುಲ್ ರಹಿಮಾನ್ ಮುಸ್ಲಿಯಾರ್ (ಅದ್ದು ಉಸ್ತಾದ್) (43) ಅವರು ಕರ್ತವ್ಯದಲ್ಲಿರುವಂತೆಯೇ ತೀವ್ರ ಅಸ್ವಸ್ಥತಗೊಂಡು ಅ.15 ರಂದು ನಿಧನರಾಗಿದ್ದಾರೆ.

ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮದರಸಗಳಲ್ಲಿ ಅಂತಿಮ‌ ಪರೀಕ್ಷೆ ನಡೆದಿದ್ದು, ತನ್ನ ಕರ್ತವ್ಯ ಮುಗಿಸಿ ಬೆಳಗ್ಗಿನ‌ ಉಪಹಾರ ಮಾಡುತ್ತಿದ್ದಾಗ ತಲೆತಿರುಗಿದಂತಾಗಿ ವಾಂತಿ ಮಾಡಿದ್ದರು.‌ ತಕ್ಷಣ ಅವರನ್ನು ಸ್ಥಳೀಯ ಕ್ಲಿನಿಕ್‌ನಲ್ಲಿ, ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತರಾಗಿರುವುದಾಗಿ ವೈದ್ಯರು ಪ್ರಕಟಿಸಿದರು.

ಎಸ್ಸೆಸ್ಸೆಫ್ ಸಂಘಟನೆಯಲ್ಲಿ ಕಾರ್ಕಳ ಡಿವಿಷನ್ ಕಾರ್ಯದರ್ಶಿ ಮತ್ತು ಅಧ್ಯಕ್ಷರಾಗಿದ್ದರು. ಪ್ರಸ್ತುತ ಎಸ್‌ವೈಎಸ್ ಸ್ವಯಂ ಸೇವಾ ಸಂಘಟನೆ “ಟೀಮ್ ಹಿಸಾಬಾ” ಇದರ ಕ್ಯಾಪ್ಟನ್ ಆಗಿದ್ದರು. ಹಲವೆಡೆ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದ ಅವರು ಎರಡು ವಾರಗಳ ಹಿಂದಷ್ಟೇ ವೇಣೂರಿನ ಮದರಸಕ್ಕೆ ಕರ್ತವ್ಯಕ್ಕೆ ಸೇರಿದ್ದರು. ಕಾರ್ಕಳದ ಅಜೆಕಾರು ಶಿರ್ಲಾಲಿನಲ್ಲಿ ಕರ್ತವ್ಯ ದಲ್ಲಿದ್ದ ವೇಳೆ ಅಲ್ಲಿ ಮಸೀದಿ ನಿರ್ಮಾಣವಾಗುವಲ್ಲಿ ಮುಂಚೂಣಿ ನಾಯಕತ್ವ ವಹಿಸಿದ್ದರು.
ಬುರ್ದಾ ಸಂಘಟನೆ, ಮಕ್ಕಳ ಪ್ರತಿಭಾ ಕಾರ್ಯಕ್ರಮಗಳ ತೀರ್ಪುಗಾರಿಕೆ, ಮದ್ಹ್ ಹಾಡುಗಾರರಾಗಿ, ಪ್ರಿಂಟಿಂಗ್, ವಿನ್ಯಾಸ, ಪ್ರತಿಭಾ ವೇದಿಕೆ, ಮೀಲಾದ್ ವೇದಿಕೆ ವಿನ್ಯಾಸ, ಮಸೀದಿ ಮದರಸಗಳಲ್ಲಿ ಸಾಮೂಹಿಕ ಅಡುಗೆ ತಯಾರಿಕೆ, ಸುನ್ನೀ ಸಂಘಟನೆಗಳು ಹಾಗೂ ಮುಅಲ್ಲಿಮ್ ಸಂಘಟನೆಗಳ ಕಾರ್ಯಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಅರ್ಹ ಕುಟುಂಬದ ಹೆಣ್ಣುಮಕ್ಕಳ ವಿವಾಹಕ್ಕಾಗಿ ಸಹಾಯಧನ ಸಂಗ್ರಹಿಸಿ ನೀಡುವುದು ಹಾಗೂ ಝಿಯಾರತ್ ಟೂರ್ ಗಳನ್ನು ಸಂಘಟಿಸುವುದು ಹೀಗೆ ಎಲ್ಲಾ ರೀತಿಯಿಂದ ಜನರ ಮೆಚ್ಚುಗೆ ಗಳಿಸಿದ್ದರು.


ಮೃತರು ತಾಯಿ ನೆಫೀಸಮ್ಮ, ಪತ್ನಿ ರಂಳತ್, ಮೂವರು ಹೆಣ್ಣು ಮಕ್ಕಳಾದ ಮಾಶಿತಾ, ಅನ್ಸೀರಾ ಮತ್ತು ಬಿಶಾರಾ, ಸಹೋದರಾದ ಅಬ್ಬಾಸ್, ಇಸ್ಮಾಯಿಲ್ ಮತ್ತು ಹುಸೈನ್ ಸ‌ಅದಿ, ಸಹೋದರಿ ಬೀಫಾತಿಮಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬೃಹತ್ ರಕ್ತದಾನ ಶಿಬಿರ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!