April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ:ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿ,ಟೆಂಪೋ ಮಗುಚಿ ಬಿದ್ದು,ರಸ್ತೆ ತಡೆ ಉಂಟಾಗಿ ಚಾರ್ಮಾಡಿ ಘಾಟಿ ಭಾಗದಲ್ಲಿ 3ತಾಸಿಗಿಂತ ಅಧಿಕ ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಲಾರಿ ಮತ್ತು 407 ಎರಡೂ ವಾಹನದ ಇಬ್ಬರು ಚಾಲಕರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಿಂದ ಕಾಲು ಸಿಲುಕಿಕೊಂಡಿದ್ದ ಲಾರಿ ಚಾಲಕನನ್ನು ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ ಡಿಕ್ಕಿಯ ರಭಸಕ್ಕೆ ಎಳನೀರು ತುಂಬಿದ್ದ 407 ವಾಹನ ಪಲ್ಟಿಯಾಗಿದ್ದು ರಸ್ತೆಯ ತುಂಬೆಲ್ಲಾ ಎಳನೀರು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸಣ್ಣ ವಾಹನಗಳು ಸಂಚರಿಸುವಷ್ಟು ಜಾಗ ಇದ್ದರು ಅಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!