24.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

ಬೆಳ್ತಂಗಡಿ : ‘ಹಳ್ಳಿಯ ರೈತರ ಮಕ್ಕಳು ಆಡುತ್ತಿದ್ದ ಕಬಡ್ಡಿ ಕ್ರೀಡೆ ಇಂದು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಬೆಳೆದಿದೆ. ಹಾಗಾಗಿ ಇಂದು ಗ್ರಾಮೀಣ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಿ ಮೂಡಿಬರಲು ಸಾಧ್ಯವಾಗಿದೆ’ ಎಂದು ಮಾಜಿ ಶಾಸಕ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.

ಅವರು ಅ.15ರಂದು ತಾಲ್ಲೂಕಿನ ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕ ಮತ್ತು ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು – ಕರಂಬಾರು ಇದರ ಆಶ್ರಯದಲ್ಲಿ ಬ್ರಹ್ಮ ಬೈದರ್ಕಳ ಗರಡಿ ಸಮಿತಿ ಶಿರ್ಲಾಲು ಕರಂಬಾರು, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ , ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಶಿರ್ಲಾಲು ಕರಂಬಾರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಷನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಯುವವಾಹಿನಿ ಸೇವಾ ಚಟುವಟಿಕೆಗಳ ಸಹಾಯಾರ್ಥ 55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಶಿರ್ಲಾಲು – ಕರಂಬಾರು ಯುವವಾಹಿನಿ ಸಂಚಲನ ಸಮಿತಿ ಅಧ್ಯಕ್ಷ ಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಶಿರ್ಲಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಎಂ ಶೆಟ್ಟಿ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಹೆಚ್,
ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಅರ್ಚಕ ಸೂರ್ಯನಾರಾಯಣ ರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಶಿರ್ಲಾಲು ಬ್ರಹ್ಮ ಬೈದರ್ಕಳ ಗರಡಿ ಸಮಿತಿ ಅಧ್ಯಕ್ಷ ವಿಶ್ವನಾಥ್ ಸಾಲಿಯಾನ್ ಪುದ್ದರಬೈಲ್, ಯುವವಾಹಿನಿ ಕೇಂದ್ರ ಸಮಿತಿ ಕೋಶಾಧಿಕಾರಿ ಪ್ರಸಾದ್ ಎಂ.ಕೆ. ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕ್ರೀಡಾ ಸಂಚಾಲಕ ಉಮೇಶ್ ಕಂಬಳದಡ್ಡ ಇದ್ದರು.

ಕರಂಬಾರು ಗ್ರಾಮದ ಕಮಲ ಎಂಬವರಿಗೆ ಆರೋಗ್ಯ ನಿಧಿ ಹಸ್ತಾಂತರಿಸಲಾಯಿತು.

ಶ್ರೇಯ ಮತ್ತು ತೇಜಸ್ವಿ ಪ್ರಾರ್ಥಿಸಿದರು. ಯುವವಾಹಿನಿ ಸಂಚಲನ ಸಮಿತಿ ನಿರ್ದೇಶಕರಾದ ದಿನೇಶ್ ಕರ್ದೊಟ್ಟು ಸ್ವಾಗತಿಸಿ, ಪ್ರಸಾದ್ ಕರಂಬಾರು ಕಾರ್ಯಕ್ರಮ ನಿರೂಪಿಸಿದರು. ಸಂಚಲನ ಸಮಿತಿಯ ಮಾಜಿ ಅಧ್ಯಕ್ಷ ರಂಜಿತ್ ಅಜಿರೋಳಿ ವಂದಿಸಿದರು.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!