26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

ಬೆಳ್ತಂಗಡಿ: ಸ. ಉ. ಹಿ. ಪ್ರಾ ಶಾಲೆ ಓಡಿಲ್ನಾಳದಲ್ಲಿ ನಡೆಯುತ್ತಿರುವ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಎನ್ನೆಸ್ಸೆಸ್‌ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ., ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ ನೀಡಿ ಶಿಬಿರದ ಬಗ್ಗೆ ಶಿಬಿರಾರ್ಥಿಗಳ ಅಭಿಪ್ರಾಯದ ಜೊತೆಗೆ ಅವರ ಎನ್ಎಸ್ಎಸ್ ಜೀವನದ ನಿದರ್ಶನಗಳ ಮೂಲಕ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಓಡಿಲ್ನಾಳ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರಾಜ್ ಪ್ರಕಾಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಅರುಣ್ ಸುಮಿತ್ ಉಪಸ್ಥಿತರಿದ್ದರು.

ಎನ್ನೆಸ್ಸೆಸ್ ಘಟಕದ ವತಿಯಿಂದ ಸವಿತಾ ಎರ್ಮಾಳ್ ಅವರನ್ನು ಗೌರವಿಸಿದರು.

ಶಿಭಿರಾಧಿಕಾರಿ ಶಂಕರ್ ರಾವ್ ಸ್ವಾಗತಿಸಿ ಸಹ ಶಿಬಿರಾಧಿಕಾರಿ ಕುಮಾರಿ ಕಾಮಾಕ್ಷಿ ಧನ್ಯವಾದವಿತ್ತರು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya
error: Content is protected !!