ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

ಪೆರಿಂಜೆ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕಾರ್ಯಕ್ರಮವಾದ ” ನನ್ನ ಮಣ್ಣು ನನ್ನ ದೇಶ ” ಅಭಿಯಾನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಸಂದರ್ಭದಲ್ಲಿ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ ನಡೆಯಿತು.

ಇಲ್ಲಿನ ಹೊಸಂಗಡಿ ಪಂಚಾಯತ್ ನ ಗ್ರಾಮಾಭಿವೃದ್ಧಿ ಅಧಿಕಾರಿ ಗಣೇಶ ಶೆಟ್ಟಿಯವರು ಸ್ವಚ್ಛತೆಯ ಅರಿವು ಸಂದೇಶ ನೀಡುವುದರೊಂದಿಗೆ ಅಭಿಯಾನಕ್ಕೆ ಚಾಲನೆ ನೀಡಿದರು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಹಾಗೂ ಶಿಬಿರ ಸಮಿತಿಯ ಕಾರ್ಯದರ್ಶಿ ವಿದ್ಯಾನಂದ ಜೈನ್ ಅವರ ಮಾರ್ಗದರ್ಶನದಲ್ಲಿ ರಾ.ಸೇ. ಯೋಜನೆಯ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಇವರ ನಾಯಕತ್ವದಲ್ಲಿ ಪೆರಿಂಜೆ ಗ್ರಾಮದಲ್ಲಿದ್ದ ಪ್ಲಾಸ್ಟಿಕ್ , ಒಣಕಸ, ಗಾಜಿನ ಚೂರುಗಳು ಇತ್ಯಾದಿ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿಗಾಗಿ ಹೊಸಂಗಡಿ ಪಂಚಾಯತ್ ವಶಕ್ಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಾಪಕರು , ಸ್ಥಳೀಯರು , ಹಿರಿಯ ಎನ್ನೆಸ್ಸೆಸ್ ಸ್ವಯಂ ಸೇವಕರು ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya
error: Content is protected !!