ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಬೆಳ್ತಂಗಡಿ : ಗೃಹಲಕ್ಷ್ಮಿ ಯೋಜನೆಯಲ್ಲಿನ ತಾಂತ್ರಿಕ ತೊಡಕುಗಳನ್ನು ಕೂಡಲೇ ಸರಿಪಡಿಸಿ, ಎಲ್ಲಾ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯುವಂತೆ ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಅನೇಕರಿಗೆ ತಾಂತ್ರಿಕ ಕಾರಣದಿಂದ ಮೊದಲ ಕಂತು ಬಂದಿಲ್ಲ. ಉಡುಪಿ ಜಿಲ್ಲೆಯಲ್ಲಿ 2,56,850 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4,03,333 ಕಾರ್ಡ್‌ದಾರರಿದ್ದಾರೆ. ಆಗಸ್ಟ್ 15ಕ್ಕೂ ಮೊದಲು ಉಡುಪಿ ಜಿಲ್ಲೆಯಲ್ಲಿ 2,03,367 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,15,726 ಕಾರ್ಡ್‌ದಾರರು ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಉಡುಪಿ ಜಿಲ್ಲೆಯಲ್ಲಿ 1,79,951 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,83,392 ಕಾರ್ಡ್ ದಾರರಿಗೆ ಯೋಜನೆಯ ಮೊದಲ ಕಂತು ಬಂದಿದೆ. ಉಡುಪಿ ಜಿಲ್ಲೆಯಲ್ಲಿ 23,416 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,334 ಕಾರ್ಡ್‌ದಾರರಿಗೆ ತಾಂತ್ರಿಕ ಕಾರಣದಿಂದ ಯೋಜನೆಯ ಮೊದಲ ಕಂತು ಸಿಕ್ಕಿಲ್ಲ. ಆಗಸ್ಟ್ 15ರ ಮೊದಲು ಅರ್ಜಿ ಸಲ್ಲಿಸಿ, ಸಮ್ಮತಿ ಪಡೆದಿದ್ದರೂ ತಾಂತ್ರಿಕ ಕಾರಣದಿಂದ ಹಣ ಬಾರದ ಅರ್ಜಿಗಳಿಗೆ ತಾಂತ್ರಿಕ ಸಮಸ್ಯೆ ಬಗೆಹರಿದ ಅನಂತರ ಆಗಸ್ಟ್ ತಿಂಗಳಿನಿಂದಲೇ ಸರ್ಕಾರದ ಯೋಜನೆಯ ಫಲ ಸಿಗಲಿದೆ. ಆದರೆ ಹೊಸ ಅರ್ಜಿ ಅಥವಾ ಸರ್ಕಾರ ಸಮ್ಮತಿಸುವ 2ನೇ ಪಟ್ಟಿಯ ಎಲ್ಲಾ ಫಲಾನುಭವಿಗಳಿಗೆ ಆಗಸ್ಟ್‌ ನಿಂದಲೇ ಪೂರ್ವಾನ್ವಯವಾಗುವಂತೆ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!