24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಕುವೆಟ್ಟು: ಮನೆಗೆ ನುಗ್ಗಿದ್ದ ಕಳ್ಳರು: ನಗದು ಸಹಿತ ರೂ. 3.87 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya
error: Content is protected !!