April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಕಬ್ಸ್ ವಿದ್ಯಾರ್ಥಿಗಳಾದ ರಿಶನ್ ಶೆಟ್ಟಿ, ಅದ್ವಿತ್ ಎಸ್ ಪೂಜಾರಿ, ಬುಲ್ ಬುಲ್ಸ್ ವಿದ್ಯಾರ್ಥಿಗಳಾದ ದಿಶಾ ಡಿ ಎ, ಉನ್ನತಿ ಎಸ್, ಅಮೀನಾ ನಭಿಸಾ ಶೈಬಾ, ಅಭಿಜ್ಞಾ ಇವರು ಮಾನ್ಯ ರಾಜ್ಯ ಪಾಲರಿಂದ ಗಾಜಿನ ಮನೆ ಬೆಂಗಳೂರು ನಲ್ಲಿ ನಡೆಯುವ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾನ್ಯ ರಾಜಪಾಲರಿಂದ ಪ್ರಶಸ್ತಿ ಪತ್ರವನ್ನು ಪಡೆಯಲಿರುವರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಎಂ ಆರ್ ರವರ ಸಹಕಾರ ದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ತೆoಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98.58 ಫಲಿತಾಂಶ

Suddi Udaya
error: Content is protected !!