32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.18 ರಂದು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಧ.ಮಂ. ಕಲಾ ಕೇಂದ್ರದ ರಂಗ ನಿರ್ದೇಶಕ ಯಶವಂತ್, “ಬದುಕು ಎಂಬುದು ಒಂದು ಕಲೆ. ಇದರಲ್ಲಿ ನಾವು ಪಾತ್ರಧಾರಿಗಳು. ಆದರೆ ವೇದಿಕೆಯಲ್ಲಿ ಪಾತ್ರ ಮಾಡಲು ನಿರಂತರ ಅಭ್ಯಾಸ ಅಗತ್ಯ” ಎಂದರು.


“ನಾವು ಕಲಿಯುವಾಗ ನಿಷ್ಕಲ್ಮಶ ಮನಸ್ಸಿನಿಂದ ಹೇಳಿದ್ದನ್ನು ಕೇಳಬೇಕು ಮಾತ್ರವಲ್ಲ ಗುರುಗಳಿಗೆ ಕಲಿಕೆ ವಿಷಯಕ್ಕೆ ಗುಲಾಮನ ರೀತಿಯಲ್ಲಿ ಇದ್ದಾಗ ಮಾತ್ರ ಎಲ್ಲವನ್ನೂ ತಿಳಿದುಕೊಳ್ಳಲು ಸಾಧ್ಯ” “ಮನುಷ್ಯ ಹುಟ್ಟಿ ಸಾಯುವ ತನಕ ಆತನ ಜೀವನವನ್ನು ದಶಾವತಾರಕ್ಕೆ ಹೋಲಿಸಬಹುದು. ಗುರಿಯನ್ನು ಸಾಧಿಸಲು ದಾರಿಯಲ್ಲಿ ಸಿಗುವ ಅಪಾಯಗಳ ಕುರಿತು ಆಲೋಚಿಸುವ ಬದಲು ಗುರಿಯ ಕಡೆಗೆ ಗಮನ ಇರಲಿ” ಎಂದು ಅವರು ತಿಳಿಸಿದರು.


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಕಾರುಣ್ಯ ಮತ್ತು ಬಳಗದವರು ಪ್ರಾರ್ಥಿಸಿದರು. ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು

Related posts

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya

ಮುಂಡಾಜೆ : ಸತ್ಯನಪಲಿಕೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!