38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

ಮುಂಡಾಜೆ: ಮುಂಡಾಜೆ ಅನುದಾನಿತ ಫ್ರೌಡ ಶಾಲೆ ಮುಂಡಾಜೆ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಬೆಂಗಳೂರು ಇಂದಿರಾನಗರ ಸಹಯೋಗದಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.20ರಂದು ಮುಂಡಾಜೆ ಫ್ರೌಡ ಶಾಲೆಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಶಿಲಾನ್ಯಾಸವನ್ನು ರೋಟರಿ ಜಿಲ್ಲಾ ಗವರ್ನರ್ ರೋ. ಹೆಚ್ ಆರ್ ಕೇಶವ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಹರೀಶ್ ಕುಮಾರ್ , ಉಜಿರೆ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ್ ಜಿ ಭಿಡೆ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ರೋ| ಪ್ರಕಾಶ್ ಕಾರಂತ, ರೋಟರಿ ಸಹಾಯಕ ಗವರ್ನರ್ ರೋ| ಡಾ| ರಮೇಶ, ರೋಟರಿ ಜಿಲ್ಲೆಯ ವಲಯ ಸೇನಾನಿ ಯಶವಂತ್ ಪಟವರ್ಧನ್, ಬದುಕು ಕಟ್ಟೋಣ ಬನ್ನಿ ಸಂಚಾಲಕ ಮೋಹನ್ ಕುಮಾರ್ ಕೆ, ಮುಂಡಾಜೆ ಗ್ರಾ.ಪಂ. ಅಧ್ಯಕ್ಷ ಗಣೇಶ ಬಂಗೇರ, ಬೆಂಗಳೂರು ರೋಟರಿ ಅಧ್ಯಕ್ಷ ರೋ| ಬಾಲಕೃಷ್ಣ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಬಾಳೀಗಾ, ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ರೋ| ನಾಗರಾಜ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಮ,ಉಂಡಾಜೆ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವೆಂಕಟೇಶ್ವರ ಭಟ್ ಉಪಸ್ಥಿತರಿರುವರು.,

Related posts

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya
error: Content is protected !!