30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

ಬೆಳ್ತಂಗಡಿ: ದೇವಸ್ಥಾನ ಮಠ ಮಂದಿರಗಳಲ್ಲಿ ಭಕ್ತರೀಗೆ ಸಂಸ್ಕಾರ ಸಂಸ್ಕ್ರತಿ ತಿಳಿಸುವಂತಹ ಕೆಲಸವಾಗಬೇಕು ಸಂಸ್ಕಾರ ಈ ಸಮಯದಲ್ಲಿ ಉಳಿದಿದ್ರೆ ಅದು ಕನ್ನಡ ಮಾದ್ಯಮದಲ್ಲಿ ಮಾತ್ರ ಮಕ್ಕಳಿಗೆ ಧಾರ್ಮಿಕ ವಿಚಾರವನ್ನು ತಿಳಿಸುವ ಹೆತ್ತವರ ಕರ್ತವ್ಯವಾಗಿದೆ ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಶ್ರೀ ಈಶ ವಿಠಲದಾಸ ಸ್ವಾಮಿಜಿ ನುಡಿದರು.

ಅವರು ಅ 20 ರಂದು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆಯಲ್ಲಿ ಜರಗಿದ ಪ್ರಥಮ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಧಾರ್ಮಿಕ ಸಭೆಯ  ಅಧ್ಯಕ್ಷತೆಯನ್ನು ಶಶಿಧರ ಶೆಟ್ಟಿ ಉದ್ಯಮಿಗಳು ತುಳು ಸಂಘ ಬರೋಡಾ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಶಾಂತ್ ಪಾರೆಂಕಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾರದೋತ್ಸವ ಸಮಿತಿ ಅಧ್ಯಕ್ಷ ನಿತೇಶ್ ಕೆ ಓಡಿಲ್ನಾಳ, ಗೌರವಾಧ್ಯಕ್ಷ ರಾಮಣ್ಣ ಕುಲಾಲ್ ಕೋಲಾಜೆ, ವ್ಯವಸ್ಥಾಪನಾ‌ ಸಮಿತಿ‌ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುದೀಪ್ ಶೆಟ್ಟಿ ಸ್ವಾಗತಿಸಿ, ಮಹೇಶ್ ಲಾಯಿಲ ಕಾರ್ಯಕ್ರಮ ನಿರೂಪಿಸಿದರು. ನಿತೇಶ್ ಕೆ ಧನ್ಯವಾದ ವಿತ್ತರು. ಬೆಳಿಗ್ಗೆ ದೇವತಾ‌ ಪ್ರಾರ್ಥನೆಯೊಂದಿಗೆ ಶಾರದಾ ದೇವಿಯ ಪ್ರತಿಷ್ಠಾಪನೆ ಮಹಾಪೂಜೆ ಪ್ರಸಾದ ವಿತರಣೆ ಸಾರ್ವಜನಿಕ ಅನ್ನ ಸಂತರ್ಪಣೆ ಸಾಂಸ್ಕ್ರತಿ ಕಾರ್ಯಕ್ರಮ ಪ್ರಸಿದ್ದ ಕಲಾವಿದರಿಂದ ತಾಳಮದ್ದಳೆ ಜರಗಿತು.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya
error: Content is protected !!