23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

ಅರಸಿನಮಕ್ಕಿ : ಅಶ್ವಮೇಧ ಫ್ರೆಂಡ್ಸ್ ಅರಸಿನಮಕ್ಕಿ ಹಾಗೂ ಊರ ಪರವೂರ ಮಿತ್ರ ಸಂಘಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅರಸಿನಮಕ್ಕಿ ಇದರ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರವು ಅ.22 ರಂದು ಅರಸಿನಮಕ್ಕಿ ಸಿ. ಎ. ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಅರಸಿನಮಕ್ಕಿ ಅಶ್ವಮೇಧ ಫ್ರೆಂಡ್ಸ್ ಅಧ್ಯಕ್ಷ ಹರೀಶ್ ಕುಮಾರ್ ಯು ವಹಿಸಿದರು.

ಮುಖ್ಯ ಅತಿಥಿಗಳಾಗಿ ಅರಸಿನಮಕ್ಕಿ ಗ್ರಾ.ಪಂ.ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಘವೇಂದ್ರ ನಾಯಕ್, ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿರ್ದೇಶಕ ಧರ್ಮರಾಜ್ ಗೌಡ ಅಡ್ಕಾಡಿ, ಶಿಶಿಲ ಗ್ರಾ.ಪಂ ನಿಕಟಪೂರ್ವಾಧ್ಯಕ್ಷ ಸಂದೀಪ್ ಗೌಡ ಅಮ್ಮುಡಂಗೆ, ಶಿಬಾಜೆ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ರತೀಶ್ ಬಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿ ಉಪಸ್ಥಿತರಿದ್ದು ರಕ್ತದಾನ ಮಾಡಿದರು.

Related posts

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya
error: Content is protected !!