25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ

ಬೆಳ್ತಂಗಡಿ:ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷ ಸಮಾವೇಶವು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ ದೇಶ ಮತ್ತು ರಾಜ್ಯದಲ್ಲಿನ ಸ್ಥಿತಿಗತಿಗಳ ವಿಷಯ ಬಗ್ಗೆ ಪ್ರಸ್ತಾಪಿಸಿ ಪಕ್ಷದ ಅಗತ್ಯತೆಯನ್ನು ತಿಳಿಸಿದರು. ರಾಜ್ಯದಲ್ಲಿ ಪಕ್ಷದ ಕಾರ್ಯ ಚಟುವಟಿಕೆಯ ವರದಿಯನ್ನು ನೀಡಿದರು.

ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಮಾತನಾಡಿ ಪಕ್ಷದ ಅನಿವಾರ್ಯತೆಯನ್ನು ತಿಳಿಸಿ, ಎಸ್‍ಡಿಪಿಐ ಪಕ್ಷವು ನಡೆಸಿದ ಹೋರಾಟದ ಬಗ್ಗೆ ವಿವರಿಸಿ ಮಾತನಾಡುತ್ತ ಮುಂದಿನ ದಿನಗಳಲ್ಲಿ ಪಕ್ಷವು ಇನ್ನಷ್ಟು ಹೋರಾಟಗಳನ್ನು ಕೈಗೆತ್ತಿಗೊಳ್ಳಲಿದ್ದೇವೆ ತಾವೆಲ್ಲರೂ ಪಕ್ಷದ ಬೆನ್ನೆಲುಬಾಗಿ ನಿಂತು ನಮ್ಮೊಂದಿಗೆ ಸಹಕರಿಸಬೇಕೆಂದರು. ನವೆಂಬರ್ ತಿಂಗಳಿನಲ್ಲಿ ನಡೆಯುವ ಪಕ್ಷದ ನಿಧಿ ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕು, ಎಲ್ಲಾ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಗೊಳಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರು ಬೆಳ್ತಂಗಡಿಯಲ್ಲಿ ಪಕ್ಷವನ್ನು ಜನಸಾಮಾನ್ಯರಿಗೆ ತಲುಪಿಸಲು ಬೇಕಾದ ರೂಪುರೇಷಗಳು, ತಾಲೂಕಿನ ಜನತೆಗೆ ಎಸ್‌ಡಿಪಿಐ ಪಕ್ಷದ ಕೊಡುಗೆಯನ್ನು ಪ್ರಸ್ತಾವಿಕದಲ್ಲಿ ಮಾತಾಡಿದರು.

ಈ ಸಂದರ್ಭ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಹನೀಫ್ ಪುಂಜಾಲಕಟ್ಟೆ, ಬ್ಲಾಕ್ ನಾಯಕರು, ಪದಾಧಿಕಾರಿಗಳು, ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.

ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸ್ವಾಗತಿಸಿ, ಕುವೆಟ್ಟು ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ರವೂಫ್ ಪುಂಜಾಲಕಟ್ಟೆ ಧನ್ಯವಾದವಿತ್ತರು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya
error: Content is protected !!