23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ ಭಾಷಣಗೈದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.

ಹೇಮಾವತಿ ವಿ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ವಿವಿಧ ವಿಭಾಗದ ಮುಖ್ಯಸ್ಥರು, ಸಿಬ್ಬಂದಿಗಳು, ಅಭಿಮಾನಿಗಳು ಹಾಜರಿದ್ದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮ ಸ್ವಾಗತಿಸಿದರು. ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಿತಿಯ ಸಂಚಾಲಕ ಲಕ್ಷ್ಮೀ ನಾರಾಯಣ ರಾವ್ ವಂದಿಸಿದರು. ಎಸ್.ಡಿ.ಎಂ.ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲ ಸುನೀಲ್ ಪಂಡಿತ್ ನಿರೂಪಿಸಿದರು.

Related posts

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya
error: Content is protected !!