24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

ಉಜಿರೆಯ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನವು ರಜತಪರ್ವ ಸರಣಿಯ ಅಂಗವಾಗಿ ಯಕ್ಷದೀವಿಗೆ ತುಮಕೂರು ಇವರ ಸಹಯೋಗದಲ್ಲಿ ಅ. 25 ರಂದು ಸಂಜೆ 4-30ರಿಂದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ, ನಿಡ್ಲೆ ಇಲ್ಲಿ ಕೃತಿ ಲೋಕಾರ್ಪಣೆ ಹಾಗೂ ತಾಳಮದ್ದಳೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ 40 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕಡಂಬಿಲ ಭೀಮ ಭಟ್ಟರ ಜೀವನಕಥನ ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ (ನಿರೂಪಣೆ: ಆರತಿ ಪಟ್ರಮೆ) ಕೃತಿಯನ್ನು ಬಹುಶ್ರುತ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಅನಾವರಣಗೊಳಿಸಲಿದ್ದಾರೆ.

ಕೃತಿಕಾರ ಭೀಮ ಭಟ್ ಈ ಸಂದರ್ಭ ಉಪಸ್ಥಿತರಿರುವರು.

ಕಾರ್ಯಕ್ರಮದ ಅಂಗವಾಗಿ ‘ಸ್ಯಮಂತಕಮಣಿ’ ಎಂಬ ಯಕ್ಷಗಾನ ತಾಳಮದ್ದಳೆ ಜರುಗಲಿರುವುದು. ಹಿಮ್ಮೇಳದಲ್ಲಿ ಭಾಗವತರಾಗಿ ಮತ್ತೂರು ರಮೇಶ ಭಟ್, ಬಿ. ಜನಾರ್ದನ ತೋಳಾಡಿತ್ತಾಯ, ಪಿ. ಜಿ. ಜಗನ್ನಿವಾಸರಾವ್ ಪುತ್ತೂರು ಹಾಗೂ ಮಾ ಸಂವೃತ ಶರ್ಮಾ ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ಡಾ. ಎಂ. ಪ್ರಭಾಕರ ಜೋಶಿ, ಉಜಿರೆ ಅಶೋಕ ಭಟ್, ಡಾ. ಸಿಬಂತಿ ಪದ್ಮನಾಭ ಕೆ.ವಿ. ಹಾಗೂ ಆರತಿ ಪಟ್ರಮೆ ಪಾತ್ರನಿರ್ವಹಿಸಲಿದ್ದಾರೆ.

ಆಸಕ್ತ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಉಜಿರೆ ಅಶೋಕ ಭಟ್ ಹಾಗೂ ಕಾರ್ಯಕ್ರಮದ ಸಂಯೋಜಕರಾದ ವಿಷ್ಣು ಮರಾಠ ನಿಡ್ಲೆ ತಿಳಿಸಿದ್ದಾರೆ.

Related posts

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya
error: Content is protected !!