38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ : ಇಲ್ಲಿನ ಶಿರ್ಲಾಲಿನಲ್ಲಿರುವ ಶಿರ್ಲಾಲು – ನಲ್ಲಾರು – ಕರಂಬಾರು ಗ್ರಾಮಗಳ ಕೂಡುವಿಕೆಯಿಂದ ನಡೆಯುವ ಬೆರ್ಮೆರ್ ಬೈದೆರ್ಲೆ ಗರಡಿ ಇದರ 2023 -24 ನೇ ಸಾಲಿನ ವಾರ್ಷಿಕ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯು ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗರಡಿಯ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವನಾಥ ಸಾಲಿಯಾನ್ ಪುದ್ದರಬೈಲು ವಹಿಸಿ ಮಾತನಾಡಿ ಜಾತ್ರಾಮಹೋತ್ಸವದ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ 2023-24 ನೇ ಸಾಲಿನ ಜಾತ್ರಾ ಸಮಿತಿಯನ್ನು ರಚಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಜಾತ್ರಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಸತೀಶ್ ಪೂಜಾರಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಬಿಲ್ಲವ ಜಂಟಿ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗರಡಿ ಭಕ್ತರು ಉಪಸ್ಥಿತರಿದ್ದರು.
ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಎಂ.ಕೆ ಸ್ವಾಗತಿಸಿ ವಂದಿಸಿದರು.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!