April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಇದರ ಸಹಯೋಗದೊಂದಿಗೆ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರವು ಅ. 26 ರಂದು ಉಜಿರೆ ಸಿದ್ದವನ ನರ್ಸರಿ ಕೇಂದ್ರ ನೀರಚಿಲುಮೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮತ್ತು ಪ್ರಗತಿಪರ ಕೃಷಿಕ ಹರೀಶ್ ರಾವ್ ಎಂ.ಉದ್ಘಾಟಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಲ್. ಎಚ್ ಮಂಜುನಾಥ್ ವಹಿಸಿ ಹಲವಾರು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ತೋಟಗಾರಿಕಾ ವಿಭಾಗದ ಪ್ರಬಂಧಕ ಬಾಲಕೃಷ್ಣ ಪೂಜಾರಿ, ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್ ಚಂದ್ರಶೇಖರ, ಬೆಳಾಲು ಅಣಬೆ ಕೃಷಿಕ ಶ್ರೀಮತಿ ಮಧುರ, ಧರ್ಮಸ್ಥಳ ಜೇನು ಕೃಷಿಕ ಬಾಬು ಎಂ.ಕೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾ. ಕೃ.ಪ.ಸ.ಸಂಘದ ಅಧ್ಯಕ್ಷ ಪ್ರೀತಮ್ ಡಿ., ಧ. ಗ್ರಾ. ಯೋಜನೆಯ ನರ್ಸರಿ ಯೋಜನಾಧಿಕಾರಿ ದಯಾನಂದ ಗೌಡ, ಧರ್ಮಸ್ಥಳ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ, ಸಿಬ್ಬಂದಿಗಳು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!