32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ವಾಣಿ ಬಿ.ಆಚಾರ್ ಬೆಂಗಳೂರು ಅವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯಿಂದ ನೀಡುವ ‘ಶ್ರೇಷ್ಠ ಶಿಕ್ಷಕ ಸೌರಭ’ ಪ್ರಶಸ್ತಿಗೆ ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ, ನಿವೃತ್ತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ಆಯ್ಕೆಗೊಂಡಿದ್ದಾರೆ.

ಕನ್ನಡ ಸಂಘ-ಕಾಂತಾವರ ಕಾರ್ಕಳ ಇವರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ದಿನವಾದ ನ.1ರಂದು ಕಾರ್ಕಳ ತಾಲೂಕಿನ ಕಾಂತಾವರದಲ್ಲಿ ನಡೆಯುವ ‘ಕಾಂತಾವರ ಉತ್ಸವ-2023’ರಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಆಗಲಿದೆ. ಪ್ರಶಸ್ತಿಯು 10 ಸಾವಿರ ರೂ.ನಗದು ಮತ್ತು ತಾಮ್ರ ಪತ್ರವನ್ನೊಳಗೊಂಡಿದೆ.
ಎ.ಕೃಷ್ಣಪ್ಪ ಪೂಜಾರಿ ಅವರು ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮತ್ತು ಮಣಿಪಾಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಎಡ್ ಪದವಿ ಮಾಡಿರುತ್ತಾರೆ. ರಾಮಕುಂಜ, ಉಪ್ಪಿನಂಗಡಿ, ಪದ್ಮುಂಜ ಹಾಗೂ ಬೆಳ್ತಂಗಡಿಯ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಇವರು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕರಾಗಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ, ಉಪ್ಪಿನಂಗಡಿ ಜೇಸಿಐ ಅಧ್ಯಕ್ಷರಾಗಿ, ರಾಮಕುಂಜೇಶ್ವರ ಯಕ್ಷಗಾನ ಸಂಘದ ಸಂಚಾಲಕರಾಗಿ, ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ, ಪುತ್ತೂರು ಶ್ರೀ ಗುರುನಾರಾಯಣ ಸೇವಾ ಸಂಘದ ಉಪಾಧ್ಯಕ್ಷರಾಗಿ, ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷರಾಗಿ, ಬೆಳ್ತಂಗಡಿ ಶ್ರೀ ಗುರುರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಮತ್ತು ಇತರ ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸನ್ಮಾನ, ಬಿಲ್ಲವಾಸ್ ದುಬೈ ಗೌರವ ಪ್ರಶಸ್ತಿ, ಮುಂಬೈ ಬಿಲ್ಲವ ಮಹಾಮಂಡಲದ ಗೌರವ ಪ್ರಶಸ್ತಿ, ಅರ್ಕುಳ ಚಾರಿಟೇಬಲ್ ಟ್ರಸ್ಟ್ನಿಂದ ಸಮಾಜ ಸೇವಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಮತ್ತು ಸನ್ಮಾನಗಳನ್ನು ಇವರಿಗೆ ಪ್ರದಾನ ಮಾಡಲಾಗಿದೆ. ಶೈಕ್ಷಣಿಕ ಕಾರಾಗಾರಗಳು, ಧಾರ್ಮಿಕ ಉಪನ್ಯಾಸಗಳು, ಯಕ್ಷಗಾನ, ನಾಟಕ ಹಾಗೂ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಎ.ಕೃಷ್ಣಪ್ಪ ಪೂಜಾರಿಯವರು ಕಡಬ ತಾಲೂಕು ಆಲಂಕಾರು ಗ್ರಾಮದ ಎಣ್ಣೆತ್ತೋಡಿ ನಿವಾಸಿ, ನಿವೃತ್ತ ಶಿಕ್ಷಕ ಎಂ.ತಿಮ್ಮಪ್ಪ ಪೂಜಾರಿ ಹಾಗೂ ಮುತ್ತಕ್ಕ ದಂಪತಿಯ ಪುತ್ರರಾಗಿದ್ದಾರೆ.

Related posts

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya
error: Content is protected !!