25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಕಕಾರಂದೂರು ಗ್ರಾಮದ ನಿವಾಸಿ ಬಾಲಕೃಷ್ಣ(40) ಎಂಬವರ ದೂರಿನಂತೆ,ಅ.26 ರಂದು ಬೆಳಿಗ್ಗೆ ಬೆಳ್ತಂಗಡಿ ಕಸಬಾ ಗ್ರಾಮದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುವರೇ ನಿಂತುಕೊಂಡಿರುವಾಗ, KA-16-AA-6439 ನೇ ಕಾರನ್ನು ಅದರ ಚಾಲಕ ಆಂಜನೇಯ ಎಂಬವರು ದುಡುಕುತನದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕೃಷ್ಣರವರಿಗೆ ಗಾಯಗೊಂಡಿದ್ದು, ಗಾಯಾಳು ಬಾಲಕೃಷ್ಣರವರು ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿಅ.ಕ್ರ: 104/2023 ಕಲಂ: 279,338,ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿದೆ.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
error: Content is protected !!