April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮವನ್ನು ಅ.26 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಘವ. ಎನ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ರಮ್ಯ, ಸಮಾಲೋಚಕರು, ಎಸ್.ಕೆ.ಆರ್.ಕೆ ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು. ಶ್ರೀಮತಿ ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊ| ಸುರೇಶ್ ವಿ ಹಾಗೂ ಪ್ರೊ| ರಾಜೇಶ್ವರಿ ಉಪಸ್ಥಿತರಿದ್ದರು. ಕು| ಸ್ವಾತಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕುಮಾರಿ ವನಿತಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!