22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

ಧರ್ಮಸ್ಥಳ: ಧರ್ಮದ ಮರ್ಮವನ್ನರಿತು ನಿತ್ಯವೂ ಅನುಷ್ಠಾನಗೊಳಿಸಬೇಕು. ಧರ್ಮವು ಉಸಿರಾಟದಂತೆ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಭಾರತೀಯ ಜೈನ್‌ಮಿಲನ್‌ನ ಕೆನಡಾ ಘಟಕವನ್ನು ವೆಬಿನಾರ್ ಮೂಲಕ ಉದ್ಘಾಟಿಸಿ ಶುಭ ಹಾರೈಸಿದ ಅವರು ಸತ್ಯ, ಅಹಿಂಸೆ, ಅಪರಿಗ್ರಹ, ಸ್ಯಾದ್ವಾದ ಮೊದಲಾದ ತತ್ವಗಳು ಹಾಗೂ ಆಚಾರ-ವಿಚಾರಗಳ ಅನುಷ್ಠಾನದಿಂದ, ಜೈನರು ಅಲ್ಪಸಂಖ್ಯಾತರಾದರೂ, ಸಮಾಜದಲ್ಲಿ ಅವರಿಗೆ ವಿಶೇಷ ಸ್ಥಾನಮಾನ, ಗೌರವವಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಭ್ಯ, ಸುಸಂಸ್ಕೃತ ನಾಗರಿಕರನ್ನಾಗಿ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಜೈನ್‌ಮಿಲನ್ ಮೂಲಕ ಪರಸ್ಪರ ಪ್ರೀತಿ-ವಿಶ್ವಾಸ, ಗೌರವ, ಆತ್ಮೀಯತೆ ಹೆಚ್ಚಾಗಿ ಸಮಾಜದ ಸಂಘಟನೆ ಮತ್ತು ಬಲವರ್ಧನೆಯಾಗಬೇಕು. ತನ್ಮೂಲಕ ಸಮಾಜ ಸೇವೆ ಹಾಗೂ ಸತ್ಕಾರ್ಯಗಳನ್ನು ಮಾಡಲು ಅನುಕೂಲವಾಗುತ್ತದೆ.


ಕೆನಡಾ ವಿಶ್ವದ ದೊಡ್ಡ ದೇಶವಾದರೂ ಶಾಂತಿಪ್ರಿಯ ದೇಶವಾಗಿದೆ. ಅಲ್ಲಿನ ಜನರ ಸೌಮ್ಯ ಸ್ವಭಾವ, ತಾಳ್ಮೆ, ಸೇವಾಕಳಕಳಿಯನ್ನು ಹೆಗ್ಗಡೆಯವರು ಶ್ಲಾಘಿಸಿ ಅಭಿನಂದಿಸಿದರು.
ಭಾರತೀಯ ಜೈನ್‌ಮಿಲನ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ನೇತೃತ್ವದಲ್ಲಿ ಜೈನ್‌ಮಿಲನ್ ಶಾಖೆಗಳು ಅಮೇರಿಕಾ, ಲಂಡನ್, ಆಸ್ಟ್ರೇಲಿಯಾ ಮೊದಲಾದ ಹಲವು ದೇಶಗಳಲ್ಲಿ ಪ್ರಾರಂಭವಾಗಿದ್ದು ವಿಶ್ವ ಜೈನ್‌ಮಿಲನ್ ದೇಶ-ವಿದೇಶಗಳಲ್ಲಿ ಮಧುರ ಬಾಂಧವ್ಯ ಬೆಳೆಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆನಡಾ ಜೈನ್‌ಮಿಲನ್ ಶಾಖೆಯ ಅಧ್ಯಕ್ಷರಾದ ವೀರ್ ರಾಜಗೌಡ ಪಾಟೀಲ್ ಮತ್ತು ಎಲ್ಲಾ ಪದಾಧಿಕಾರಿಗಳಿಗೆ ಹೆಗ್ಗಡೆಯವರು ಶುಭ ಹಾರೈಸಿದರು.


ಮೂಡಬಿದ್ರೆ ಜೈನ ಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.
ಕೆನಡಾದ ಲೋಕಸಭಾ ಸದಸ್ಯ ಚಂದ್ರಾ ಆರ್ಯ ಮತ್ತು ಸಂಗೀತ ಆರ್ಯ, ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಶುಭಾಶಂಸನೆ ಮಾಡಿದರು.

Related posts

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!