ಬೆಳ್ತಂಗಡಿ :ಸಾಮಾಜಿಕ ಜಾಲತಾಣದಲ್ಲಿ ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” ಮಾಡುತ್ತಿದ್ದಾರೆ ಎಂಬ ಸತ್ಯಕ್ಕೆ ದೂರವಾದ ಸುದ್ದಿ ಹರಿದಾಡತ್ತಿದ್ದು.ಈ ಸಂದೇಶಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ.ಸಂಭಂದ ಇರುವುದಿಲ್ಲ.ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷ ರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ ಹಾಗೂ ಕೆ.ಎಮ್ ನಾಗೇಶ್ ಕುಮಾರ್ ಗೌಡ ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಕ್ಷೇತ್ರವನ್ನು ಅವಹೇಳನ ಮಾಡುವುದು, ಅಗೌರವ ತೋರುವುದು, ಶ್ರೀ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಬಲವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

previous post
next post