25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

ಉಜಿರೆ: ನಮ್ಮ ನಾಡಿನ ಪ್ರಸಿದ್ಧ ದೇವೀ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಆಶ್ವಯುಜ ಮಾಸದ ಹುಣ್ಣಿಮೆಯಂದು ಅ. 28 ರಂದು ಹೊರಟು ಸಾಯಂಕಾಲ ಮಂಗಳೂರಿನ ಕದ್ರಿ ಶ್ರೀ ಮಂಜುನಾಥನ ಸನ್ನಿಧಿಗೆ ಆಗಮಿಸಿ ಅ.29 ಭಾನುವಾರ ಬೆಳಿಗ್ಗೆ ಕದ್ರಿಯಿಂದ ಹೊರಟ ಯಾತ್ರೆ ಮಧ್ಯಾಹ್ನ 1 ಗಂಟೆಗೆ ಉಜಿರೆಯ ಜನಾರ್ದನ ಸ್ವಾಮಿ ದೇವಾಲಯವನ್ನು ತಲುಪಿದಾಗ ಉಜಿರೆಯಲ್ಲಿ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಧರ್ಮ ಜಾಗೃತಿ‌ ಸಮಿತಿ ಸಂಚಾಲಕ ಶಶಿಧರ ಶೆಟ್ಟಿ ನವಶಕ್ತಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜ‌ನೆ ಡಾ.ಎಲ್ ಹೆಚ್.ಮಂಜುನಾಥ್, ಅನಿಲ್ ಕುಮಾರ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇಲ್ಲಿಂದ ಮಧ್ಯಾಹ್ನ 3 ಗಂಟೆಗೆ ಪಾದಯಾತ್ರೆಯ ಮೂಲಕ ಹೊರಟು ನಮ್ಮ ನಾಡಿನ ಪ್ರಸಿದ್ಧ ಶ್ರದ್ಧಾಕೇಂದ್ರವಾದ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬಂದು ಪ್ರಾರ್ಥನೆಯೊಂದಿಗೆ ಧರ್ಮ ಸಂರಕ್ಷಣಯಾತ್ರೆ ಸಂಪನ್ನಗೊಳ್ಳಲಿದೆ.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya
error: Content is protected !!