April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ ನಿವಾಸಿ ಸಂದೀಪ್ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.


ಧರ್ಮಸ್ಥಳ ಗ್ರಾಮದ ನಿವಾಸಿ ಸಂದೀಪ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ, ಅ.29ರಂದು‌ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ,ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ, ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ತ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವರೇ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶೀಗಳ ವಿರುದ್ದ
ದೂರು ನೀಡಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!