September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

ಮೃತ ಜಗದೀಶ್

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ.

ಆರೋಪಿ ಕೃಷ್ಣಯ್ಯ ಆಚಾರ್

ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯಾಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ.


ರಾತ್ರಿಯ ವೇಳೆ ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ತಂದೆ ಹಾಗೂ ಮಗನ ನಡುವೆ ಮಾತಿನ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿದಾಗ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ. ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ ನಂ ೧೦೭/೨೦೨೩ ಕಲಂ;೩೦೨ ಐಪಿಸಿ ಪ್ರಕರಣ ದಾಖಲಿಸಲಾಗಿದೆ

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya
error: Content is protected !!