38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

ಬೆಳ್ತಂಗಡಿ ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ/ ಪ್ರೌಢ ಶಾಲೆಗಳ 2023-24ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ, ಬೆಳ್ತಂಗಡಿ ತಾಲೂಕು ಇದರ ವಿದ್ಯಾರ್ಥಿಗಳು ಪ್ರಾಥಮಿಕ ಬಾಲಕರ ವಿಭಾಗದಲ್ಲಿ 7ನೇ ತರಗತಿಯ ಮೋಕ್ಷಿತ್ 100 ಮೀಟರ್, 200 ಮೀಟರ್ ಓಟದಲ್ಲಿ ಮತ್ತು ಉದ್ದ ಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.


ಪ್ರೌಢಶಾಲಾ ವಿಭಾಗದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಮೋನಿಷಾ 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ. ಶಾಲಾ ಪ್ರಾoಶುಪಾಲರಾದ ಶ್ರೀಧರ್ ಶೆಟ್ಟಿ ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿ ಶುಭ ಹಾರೈಸಿದರು.

Related posts

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!