ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ ನಿವಾಸಿ ಸಂದೀಪ್ ರೈ ಎಂಬವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ ಸಂದೀಪ್ ರೈ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ, ಅ.29ರಂದು ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ,ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಟಿಸಿರುವುದಾಗಿ, ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ, ಮನೋಜ್ ಸಾಲ್ಯಾನ್ ಕುಂಜರ್ಪ, ಮತ್ತು ಇತರರ ವಿರುದ್ದ ಹಾಗೂ ಸಮಾಜದ ಸ್ವಾಸ್ತ್ಯವನ್ನು ಕದಡುವಂತಹ ಕೆಟ್ಟದಾಗಿ ಶಬ್ದಗಳನ್ನು ಬರೆದ ಬ್ಯಾನರ್ ಅಳವಡಿಸುವರೇ ಅನುಮತಿ ನೀಡಿದ ಉಜಿರೆಯ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶೀಗಳ ವಿರುದ್ದ
ದೂರು ನೀಡಿದ್ದರು.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 106 /2023 ಕಲಂ; 120(B)153(A) 153(B) IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.