25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು ಕ್ಷೇತ್ರದ ಭಕ್ತ ವರ್ಗ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಶಾಸಕ ಹರೀಶ್ ಪೂಂಜರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕ್ಷೇತ್ರದ ಬಗ್ಗೆ ತಿಳಿಸಿದರು‌. ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿದ್ದು ಸಮಿತಿ ಗೌರವಾಧ್ಯಕ್ಷ ಹರೀಶ್ ಪೂಂಜರವರಲ್ಲಿ ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರವನ್ನು ಯಾಚಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಹಾಗೂ ಊರವರ ವತಿಯಿಂದ ಶಾಸಕರಿಗೆ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಆನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಎಂ ಪಾರೆಂಕಿ,ಆರ್ಚಕರಾದ ಸೂರ್ಯನಾರಾಯಣ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಕುಶಾಲಪ್ಪ ಗೌಡ ಪೊಸಲಾಯಿ, ಸುಧೀರ್ ಆರ್ ಸುವರ್ಣ,ನಾರಾಯಣ ಗೌಡ, ವಿಶ್ವನಾಥ್,ಸಂಜೀವ ನಾಯ್ಕ್, ಚಿದಾನಂದ,ವಂಸತ ,ಸತೀಶ್, ಜಗನ್ನಾಥ, ಸತೀಶ್, ವಿಶ್ವನಾಥ್, ಜಯಂತಿ, ವೇದಾವತಿ,ಬಾಲಕೃಷ್ಣ,ಕೃಷ್ಣಪ್ಪ ಪಿದಾರ ಶೀನಪ್ಪ, ಸೋಮನಾಥ ಇವರುಗಳು ಉಪಸ್ಥಿತರಿದ್ದರು.

Related posts

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!