22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಅ.30ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ರವರು ವಹಿಸಿದ್ದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೋಹಿಣಿ ರವರು ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಮತ್ತು ಉದ್ದೇಶಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಣ ತಜ್ಞರು ಪೋಷಕರೂ ಆದ ಡಾ. ಪ್ರದೀಪ್ ರವರು ಮೊಬೈಲ್ ಬಳಕೆಯ ಸಾಧಕ ಬಾಧಕಗಳನ್ನು ವಿವರಿಸುತ್ತಾ ಮೊಬೈಲಿನಿಂದ ಹೊರಡುವ ವಿಕಿರಣಗಳು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಸಮಸ್ಯೆಗಳನ್ನು ಉಂಟು ಮಾಡುತ್ತಿದ್ದು ಪೋಷಕರು ಮಕ್ಕಳು ಮೊಬೈಲ್ ಬಳಸದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು .

ನಂತರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು ಪೋಷಕರಾದ ಯೋಗಿಶ್ ರವರು ಮಾತನಾಡಿ ಸರಕಾರಿ ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರಾದ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು . ಸಹ ಶಿಕ್ಷಕಿ ಶ್ರೀಮತಿ ಶ್ರೀಲತಾ ಸಿ ಎಚ್ ರವರು SEAS ಪರೀಕ್ಷೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ನಾವೂರು ಪ್ರೌಢಶಾಲಾ ಹಿಂದಿ ಶಿಕ್ಷಕಿ ಶ್ರೀಮತಿ ಮೀನಾ ರವರು ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರುಗಳಾದ ಹರೀಶ್ ಸಾಲಿಯಾನ್, ಗಣೇಶ್ ಗೌಡ, ಶ್ರೀಹಸೈನಾರ್, ಎಸ್ ಡಿ ಎಂ ಸಿ ಸದಸ್ಯರುಗಳು ,ಪೋಷಕರು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಶ್ರೀಮತಿ ಶೋಭಾ ಪಿ ಡಿ ರವರು ಧನ್ಯವಾದ ನೀಡಿದರು. ಶಿಕ್ಷಕಿ ಶ್ರೀಮತಿ ಶುಭ ಎಂ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!