30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸರಕಾರಿ‌ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸ ಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ಸಾಂಸ್ಕೃತಿಕ ಸಂಘ ಇದರ ವತಿಯಿಂದ ಅ.30 ರಂದು 2023-24ನೇ ಸಾಲಿನ ಸಾಂಸ್ಕೃತಿಕ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಸಾಂಸ್ಕೃತಿಕ ಸಂಘದ ಸಂಚಾಲಕಿಯಾದ ಡಾ. ಪ್ರೀತಿ ಕೆ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ.ಕೆ ಶರತ್ ಕುಮಾರ್ ನೆರವೇರಿಸಿ, ಅಧ್ಯಕ್ಷೀಯ ನುಡಿಗಳನ್ನಾಡಿ ಶುಭವನ್ನು ಹಾರೈಸಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪ್ರತಿಭಾ ವೇದಿಕೆ ಸಂಚಾಲಕರಾದ ಪ್ರೊ. ಮಾಧವ, ಕಾಲೇಜಿನ ವಿದ್ಯಾರ್ಥಿ ನಾಯಕಿ ವಾಣಿ, ಸಾಂಸ್ಕೃತಿಕ ಸಂಘದ ನಾಯಕರಾದ ಮನೋಜ್, ಹೃತಿಕ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಹೃತಿಕ ಸ್ವಾಗತಿಸಿ, ಮನೋಜ್ ಧನ್ಯವಾದವಿತ್ತರು. ವಸುಧ ನಿರೂಪಿಸಿದರು.
ಉದ್ಘಾಟನಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕಾಲೇಜ್ ಲೋಗೋ ಮೇಕಿಂಗ್ ಮತ್ತು ಸೋಲೋ ಸಿಂಗಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

Related posts

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya
error: Content is protected !!