September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

ಮಂಗಳೂರು: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ 106 ವರ್ಷದ ಮಿಜಾರು ಗುತ್ತು ಆನಂದ ಆಳ್ವ ರವರು ಅ.31ರಂದು ನಿಧನರಾಗಿದ್ದಾರೆ.

ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವತ್ತು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆನಂದ ಆಳ್ವರವರು ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಕೃಷಿಕರಾಗಿದ್ದರು. 1979 ರಿಂದ 1989 ರವರೆಗೆ ತಮ್ಮ ವಿಶಾಲವಾದ ಭತ್ತದ ಗದ್ದೆಯಲ್ಲಿ ಕಂಬಳವನ್ನು ಪ್ರವೇಶ ಟಿಕೆಟ್‌ಗಳೊಂದಿಗೆ ಆಯೋಜಿಸಿದ್ದ ಕೀರ್ತಿ ಕೂಡ ಆನಂದ ಆಳ್ವರಿಗೆ ಸಲ್ಲುತ್ತಿದೆ.

ಮೃತರು ಡಾ. ಮೋಹನ್ ಆಳ್ವ ಸಹಿತ ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya
error: Content is protected !!