July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ‌ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸಂಸ್ಥೆಗಳು ಪಾತ್ರವಾಗಿದೆ. ಕಲಾ ಕ್ಷೇತ್ರದಲ್ಲಿ ನಾಟಕ ಕಲಾವಿದ ಗುಂಡೂರು ಗ್ರಾಮದ ಭ್ರಾಮರಿ ಕುರ್ಲೊಟ್ಟು ರವಿಚಂದ್ರ ಬಿ ಸಾಲಿಯಾನ್, ಕ್ರೀಡಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ವಾಲಿಬಾಲ್ ಕ್ರೀಡಾಪಟು ಅಶ್ವಲ್ ರೈ ಬಿನ್ ಸಂಜೀವ ರೈ ಬೆಳ್ತಂಗಡಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ರವೀಂದ್ರ ಬಿ. ಸಾಲ್ಯಾನ್

ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ಭಟ್ ನೇತೃತ್ವದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಚಿನ್ಮಯ ಅಚಿತನಗರ, ಉಜಿರೆ, ಸಹಕಾರ ಕ್ಷೇತ್ರದಲ್ಲಿ ಅಧ್ಯಕ್ಷರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ಬೆಳ್ತಂಗಡಿ, 1ನೇ ಮಹಡಿ, ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣ ಬೆಳ್ತಂಗಡಿ ಪಡೆದು ಕೊಂಡ ಹಿರಿಮೆಯನ್ನು ಗಳಿಸಿದೆ.

Related posts

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!