24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ. ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.
ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ. ಗೋವುಗಳ ಬಗ್ಗೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.

1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.
ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ. ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya
error: Content is protected !!