24.4 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭಸಂದೇಶಗಳನ್ನು ನೀಡಿದರು .

ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಕುಮಾರವ್ಯಾಸ ಭಾರತದ ಪದ್ಯವನ್ನು ಓದುವುದರ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ , ಕನ್ನಡ ಭಾಷೆ ಸಾಹಿತ್ಯದ ಮಹತ್ವದ ಕುರಿತಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ ಅವರು ಉಪಸ್ಥಿತರಿದ್ದರು . ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ಮಹಾವೀರ್ ಜೈನ್ ನಿರೂಪಿಸಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ‌

Related posts

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!