23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೆ|ಫಾ|ಸ್ಟ್ಯಾನಿ ಗೋವಿಯಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.”ನಾವು ಕನ್ನಡ ನೆಲ, ಜಲ ,ಫಲವನ್ನು ಉಣ್ಣುತ್ತಿದ್ದೇವೆ. ಕನ್ನಡ ವ್ಯವಸ್ಥಿತ ಭಾಷೆ.ಕನ್ನಡ ಭಾಷೆ ಮಾತ್ರವಲ್ಲ ಅದು ನಮ್ಮ ಸಂಸ್ಕೃತಿ. ಕನ್ನಡ ನಾಡು ರೂಪುಗೊಳ್ಳಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ,ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳುವ ಸುದಿನವಿಂದು. ನಾಡು – ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ, ಕನ್ನಡ ನಾಡು -ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗ್ಗೆ ನಾವು ಗಮನಹರಿಸ ಬೇಕು ಎಂದು ಅವರು ಸಂದೇಶ ನೀಡಿದರು.ಕನ್ನಡ ನಾಡು- ನುಡಿಯ ಸಂವರ್ಧನೆಗಾಗಿ ನಾವು ಸದಾ ಸಿದ್ಧರಿರ ಬೇಕು.ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅವರು ಹೇಳಿದರು.

ಪುಂಜಾಲಕಟ್ಟೆ ಕ್ಲಸ್ಟರ್ ಸಿಆರ್ ಪಿ ಚೇತನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ| ಜೆರೊಮ್ ಡಿಸೋಜ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ವಂದಿಸಿ, ಶಿಕ್ಷಕಿಯರಾದ ಸುಚಿತ್ರಕಲಾ ರಾಜ್ಯೋತ್ಸವದ ಕುರಿತು ಮಾತನಾಡಿದರು, ಸತ್ಯವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!