ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾದ ಯಕ್ಷಗಾನ ವಿದ್ವಾಂಸರಾದ ಡಾ. ಶ್ರುತಕೀರ್ತಿರಾಜ ಅವರು ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ವಿದ್ಯಾರ್ಥಿಗಳಿಗೆ ಶುಭಸಂದೇಶಗಳನ್ನು ನೀಡಿದರು .
ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಕುಮಾರವ್ಯಾಸ ಭಾರತದ ಪದ್ಯವನ್ನು ಓದುವುದರ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ , ಕನ್ನಡ ಭಾಷೆ ಸಾಹಿತ್ಯದ ಮಹತ್ವದ ಕುರಿತಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ. ರಾಜೇಶ್ ಬಿ ಅವರು ಉಪಸ್ಥಿತರಿದ್ದರು . ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ವಿಭಾಗದ ಮಹಾವೀರ್ ಜೈನ್ ನಿರೂಪಿಸಿದರು . ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.