24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಖ್ಯಾತ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಯಕ್ಷಗಾನದಲ್ಲಿ ಹಾಸ್ಯದ ಮೂಲಕ ಅವರು ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ನಮ್ಮ ಧರ್ಮಸ್ಥಳ ಯಕ್ಷಗಾನ ಮಂಡಳಿಯಲ್ಲಿ ಕೂಡಾ ಅವರು ಕಲಾವಿದರಾಗಿ ಹಲವು ವರ್ಷಗಳ ಕಾಲ ಸೇವೆಸಲ್ಲಿಸಿರುತ್ತಾರೆ.

ಇದೇ ಜುಲೈಯಲ್ಲಿ ಅವರು ಧರ್ಮಸ್ಥಳದಲ್ಲಿ ವಾಚನ-ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಅವರ ನಿಧನದಿಂದ ಪ್ರತಿಭಾವಂತರ ಹಾಸ್ಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ  ಚಿರಶಾಂತಿಯನ್ನು ಕೋರುತ್ತಾ, ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಕುಟುಂಬವರ್ಗದವರನ್ನು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದರು.

Related posts

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!