30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya
error: Content is protected !!