29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಟಿ ಸುರೇಶ್ ಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಭಾಷಣಕಾರರಾಗಿ ಉಜಿರೆ ಎಸ್ ಡಿಎಂ ಕಾಲೇಜಿನ ಸಹ ಪ್ರಾಧ್ಯಪಕ ಹಳೆ ಮನೆ ರಾಜಶೇಖರ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಸಮಾಜಕಲ್ಯಾಣ ಇಲಾಖೆಯ ಹೇಮಚಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪ್ರೀಯಾ ಆಗ್ನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಪ್ಪ, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಭಾಗವಹಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನ ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Related posts

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ