September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!