ಮುಂಡಾಜೆ: ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿ 68ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ರವರು ಕರ್ನಾಟಕದ ಏಕೀಕರಣ ಚಳುವಳಿ, ಕರ್ನಾಟಕ ರಾಜ್ಯದ ಉದಯ ಹಾಗೂ ಕರ್ನಾಟಕ ರಾಜ್ಯೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಜಾಲಿ ಡಿ’ಸೋಜಾ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಕಛೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಕನ್ನಡದ ಸೊಬಗನ್ನು ವರ್ಣಿಸುವ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಶ್ರೀಮತಿ ವಸಂತಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ವಂದಿಸಿದರು.
ಕಾಲೇಜಿನ ಕನ್ನಡ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿತು.