ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ 2025 ಜನವರಿಯಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾಕಲಶ ಹಾಗೂ ಜೀರ್ಣೋದ್ಧಾರದ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮವು ನ.3 ರಂದು ನಡೆಯಿತು.
ಉದ್ಘಾಟನೆಯನ್ನು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿಗಳು ನೆರವೇರಿಸಿದರು.
ಅಧ್ಯಕ್ಷತೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸದಾನಂದ ಮೇಲಾಂಟ ವಹಿಸಿದರು.
ಕೆಮ್ಮಿಂಜೆ ವೇದಮೂರ್ತಿ ಬ್ರಹ್ಮಶ್ರೀ ಕಾರ್ತಿಕ್ ತಂತ್ರಿಗಳು ಧಾರ್ಮಿಕ ಪ್ರವಚನವನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಸಿದ್ದಕಟ್ಟೆ ಉದ್ಯಮಿ ದುರ್ಗಾದಾಸ್ ಶೆಟ್ಟಿ , ಎಸ್.ಕೆ.ಡಿ.ಆರ್.ಡಿ.ಪಿ ನಿರ್ದೇಶಕ ಮಹಾಬಲ ಕುಲಾಲ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಸೇವಾ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು ಹಾಗೂ ಸದಸ್ಯರು, ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ರೈತಬಂಧು ಆಹಾರೋದ್ಯಮ ಮಾರುತಿಪುರ ಅಧ್ಯಕ್ಷ ಶಿವಶಂಕರ ಸ್ವಾಗತಿಸಿ, ನವೀನ್ ಕುಮಾರ್ ನಿರೂಪಿಸಿದರು. ನಾರಾಯಣ ಧನ್ಯವಾದವಿತ್ತರು.