ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ, ಯರವ, ಸೋಲಿಗ, ಕೊರಗ, ಹಸಲರು, ಗೊಂಡ, ಮಲೆಕುಡಿಯ, ಗೌಡ್ಲು, ಸಿದ್ದಿ, ಹಕ್ಕಿಪಿಕ್ಕಿ ಡೋಂಗ್ರೀ-ಗರಾಸಿಯಾ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ ನ 4 ಮತ್ತು5 ರಂದು ಬೆಳ್ತಂಗಡಿ ಕೊಯ್ಯೂರು ಗ್ರಾಮದ ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ.


ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಶಿವಕುಮಾರ್‌ರವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು ಪುಟ್ಟ ಬಸವಯ್ಯ, ಎಚ್.ಡಿ. ಕೋಟೆ ಮೈಸೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಸೋಲಿಗ ಅಭಿವೃದ್ಧಿ ಸಂಘಟನೆಯ ಡಾ. ಸಿ. ಮಾದೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

Leave a Comment

error: Content is protected !!