April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.


ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು. ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!