ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಯ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣಾ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು.

ಡೆಸ್ಕ್ ಬೆಂಚು ವಿತರಣೆ ಕಾರ್ಯಕ್ರಮವನ್ನು ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರು ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್. ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ್ ಆರ್.ಪೈ., ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಚಿನ್ಮಯಿ ಇಂಡಸ್ಟ್ರೀಸ್ ಮಾಲಕ ಸುಂದರ ಗೌಡ ಇಚ್ಚಿಲ, ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಬಂಧಕರು ಹಾಗೂ ಮೇಲ್ವಿಚಾರಕ ಶೇಖರ್ ವೈ, ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು.ಸುಧೀರ್ ಕಾಯ೯ಕ್ರಮ ನಿರೂಪಿಸಿದರು.

Leave a Comment

error: Content is protected !!