September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್‌ನ ಟವರ್ ಕುಸಿದು ಬಿದ್ದ ಸ್ಥಳದಲ್ಲಿ ಇಂದು ಟವರ್ ಬದಲಿಗೆ ವಿದ್ಯುತ್ ಕಂಬ ಅಳವಡಿಸಿ, ಧರ್ಮಸ್ಥಳ ಕಡೆಗೆ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಉಜಿರೆ ಮೆಸ್ಕಾಂ ಉಪವಿಭಾಗದ ಸ.ಕಾ. ಅಭಿಯಂತರಾದ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ತಿಳಿಸಿದ್ದಾರೆ. ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ್ದ ಮೆಸ್ಕಾಂ ಪವರ್ ಮ್ಯಾನ್, ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ಲಾಗ್ಸ್ ಅವರಿಗೆ ಮಾಹಿತಿ ನೀಡಿದ್ದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಈ ಸಂದರ್ಭ ಪವರ್ ಪ್ರೊಜೆಕ್ಟ್ ನ ಸಿಬ್ಬಂದಿಗಳು ಬಂದಿದ್ದ ಒಂದು ಕಾರು ಮತ್ತು ಬೈಕ್‌ನ ಮೇಲೆಯೇ ವಾಲಿಕೊಂಡು ಬಂದಿದ್ದ ಟವರ್ ಬಿದ್ದು, ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದರು.

ಮೆಸ್ಕಾಂ ಇಲಾಖೆಯ ತುರ್ತು ಸ್ಪಂದನೆಯಿಂದಾಗಿ ಹೆಚ್ಚಿನ ಅನಾಹುತ ತಪ್ಪಿತ್ತು. ಟವರ್ ಕುಸಿತದ ಕಾರಣ ಸ್ಥಗಿತಗೊಂಡಿ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆಗೆ ಮೆಸ್ಕಾಂ ಬದಲಿ ಕಂಬದ ವ್ಯವಸ್ಥೆ ಮಾಡಿ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಸುದ್ದಿ ಉದಯ ಫಲಶ್ರುತಿ: ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು ವರದಿ ಬೆನ್ನಲ್ಲೇ ತೆಗೆದಿದ್ದ ಬೇಲಿಗಳ ಅಳವಡಿಕೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!